ಆರ್‌ಬಿಐ ಯಲ್ಲಿನ 926 ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉದ್ಯೋಗ ಮಾಹಿತಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 926 ಹುದ್ದೆಗಳು ಖಾಲಿಯಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಆರ್‌ಬಿಐ ಯಲ್ಲಿನ 926 ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿಗೆ 1 ಡಿಸೆಂಬರ್ 2019ಕ್ಕೆ ಅನ್ವಯವಾಗುವಂತೆ 20 ರಿಂದ 28 ವರ್ಷದ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 2020 ರ ಜನವರಿ 16 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಪದವಿಯನ್ನು ಪಡೆದಿರಬೇಕಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ. ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಭಾಷಾ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆರ್‌ಬಿಐನ ವೆಬ್‌ಸೈಟ್ ನ್ನು ಕ್ಲಿಕ್ ಮಾಡಬಹುದಾಗಿದೆ.

Also Read  ಕಡಬ: ಆಲ್ಸ್ಟಿನ್ ಗ್ಲೋಬಲ್ ಎಲ್ಇಡಿ ವರ್ಲ್ಡ್ ಶುಭಾರಂಭ ➤ ಎಲ್ಇಡಿ ಲೈಟ್ಸ್ ಗಳ ತಯಾರಿ, ಮಾರಾಟ ಹಾಗೂ ರಿಪೇರಿ ಲಭ್ಯ

error: Content is protected !!
Scroll to Top