ಮಂಗಳೂರು ಗೋಲಿಬಾರ್ ಪ್ರಕರಣ: ಹಾಲಿ ನ್ಯಾಯಾಧೀಶರಿಂದ ತನಿಖೆ ಒತ್ತಾಯಿಸಿ ನಾಳೆ ಧರಣಿ

ಮಂಗಳೂರು, ಜ.1: ಮಂಗಳೂರು ಗೋಲಿಬಾರ್ ಪ್ರಕರಣವನ್ನು ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ಒಳಪಡಿಸಬೇಕೆಂದು ಒತ್ತಾಯಿಸಿದ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷ, ಸಂಘಟನೆಗಳ ಜಂಟಿ ಆಶ್ರಯದಲ್ಲಿ ಜ.2ರಂದು ಅಂಬೇಡ್ಕರ್‌ ಪ್ರತಿಮೆಯ ಮುಂಭಾಗದಲ್ಲಿ ಸಾಮೂಹಿಕ ಧರಣಿ ನಡೆಸಲು ನಿರ್ಧಾರ ಮಾಡಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷ, ಸಂಘಟನೆಗಳ ನಿಯೋಗದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಲಾಠಿಚಾರ್ಚ್ ಹಾಗೂ ಗೋಲಿಬಾರ್‌ಗೆ ಕಾರಣವಾಗಿರುವ ಪೊಲೀಸ್‌ ಅಧಿಕಾರಗಳು ಮೇಲೆ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಸರಕಾರ ಗೋಲಿಬಾರ್‌ಗೆ ಬಲಿಯಾದ ಅಮಾಯಕರ ಕುಟುಂಬಕ್ಕೆ ಘೋಷಣೆ ಮಾಡಿದ ಪರಿಹಾರವನ್ನು ನೀಡಬೇಕು. ಅಲ್ಲದೆ ಗಾಯಗೊಂಡವರಿಗೂ ಪರಿಹಾರ ನೀಡಬೇಕು. ಈ ಪ್ರಕರಣಕ್ಕೆ ಸಂಬಂಧಿಸಿ ಬಂಧನ ಮಾಡಿರುವ ಅಮಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

Also Read  ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ಸಿಎಂ

ಎನ್‌ಆರ್‌ಸಿ ಹಾಗೂ ಸಿಎಎ ವಿರುದ್ಧ ಮಾಡಿ ಪ್ರತಿಭಟನೆಗೆ ಅನುಮತಿ ನೀಡುವ ವಿಚಾರದಲ್ಲಿ ತಾರತಮ್ಯ ಮಾಡಲಾಗಿದೆ. ಅನಗತ್ಯವಾಗಿ ನಿಷೇದಾಜ್ಞೆ ಹೇರಿದ್ದು ಗೊಂದಲಕ್ಕೆ ಕಾರಣವಾಗಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ಮಾಡಿ ನಿಷೇದಾಜ್ಞೆ ಉಲ್ಲಂಘನೆ ಮಾಡಿ ಪ್ರತಿಭಟನೆ ನಡಿಸಿದ್ದಾರೆ. ಆ ಸಂದರ್ಭದಲ್ಲಿ ಅಲ್ಲಿನ ಪೊಲೀಸ್‌ ಇಲಾಖೆ ಅದನ್ನು ಶಾಂತಿಯುತವಾಗಿ ನಿರ್ವಹಣೆ ಮಾಡಿದ್ದಾರೆ. ಆದರೆ ಮಂಗಳೂರಿನಲ್ಲಿ ಲಾಟಿಚಾರ್ಚ್ ಮಾಡಲಾಗಿದೆ. ಮುಂದಿನ ಎಲ್ಲಾ ಅಹಿತಕರ ಘಟನೆಗಳಿಗೆ ಇದೇ ಕಾರಣವಾಗಿದೆ ಎಂದರು.

ಪೊಲೀಸ್‌ ಕಮಿಷನರ್‌ ಡಾ.ಹರ್ಷ ಹೇಳಿದ ಪ್ರತಿಭಟನಕಾರರ ಸಂಖ್ಯೆ ಹಾಗೂ ಎಫ್‌ಐಆರ್‌ನಲ್ಲಿರುವ ಸಂಖ್ಯೆ, ಶಸ್ತ್ರಾಸ್ತ್ರಗಳ ಲೂಟಿಗೆ ಯತ್ನ ಮೊದಲಾದ ತಪ್ಪಾದ ಮಾಹಿತಿಗಳು, ಸಿಸಿಟಿವಿ ಫೋಟೀಜ್‌ಗಳಲ್ಲಿ ಆಯ್ದ ಫೂಟೇಜ್‌ ಮಾತ್ರ ಬಹಿರಂಗ ಮಾಡಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ರಾಜ್ಯ ಗೃಹ ಸಚಿವರು, ಮುಖ್ಯಮಂತ್ರಿಗಳು ಈ ಪ್ರಕರಣದ ಹಿಂದೆ ವಿಪಕ್ಷಗಳ ಕೈವಾಡವಿದೆ ಎಂದುಆರೋಪ ಮಾಡಿದ್ದಾರೆ. ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆಯಾಗಲೇ ಬೇಕು ಎನ್ನುವ ಉದ್ದೇಶದಿಂದ ಈ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯ ಮಾಡಿದರು

error: Content is protected !!
Scroll to Top