ರಾಜ್ಯ ಸರ್ಕಾರದ  ಸಾಧನೆ; ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ನೂರು ದಿನ ಪೂರೈಸಿ ಮುನ್ನಡೆದಿದ್ದು, ಈ ಅವಧಿಯಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನೆರೆ, ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಮಿನಿ ವಿಧಾನಸೌಧದಲ್ಲಿ ಮೂರು ದಿನಗಳ ಕಾಲ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.


ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ. ಅವರು ಬುಧವಾರ ಪ್ರದರ್ಶನಕ್ಕೆ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು,  ಹಲವು ಕಾರ್ಯಕ್ರಮಗಳ ಮಾಹಿತಿಯು ಛಾಯಾಚಿತ್ರ ಪ್ರದರ್ಶನದಲ್ಲಿ ಒಳಗೊಂಡಿದ್ದು, ಸಾರ್ವಜನಿಕರು ಮಾಹಿತಿ ಪಡೆದು ಸೌಲಭ್ಯಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದರು. ಈ ಸಂದರ್ಭದಲ್ಲಿ ಮಂಗಳೂರು ತಹಶಿಲ್ದಾರ್ ಗುರುಪ್ರಸಾದ್, ದ.ಕ. ಜಿಲ್ಲಾ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಪಿ. ಕೃಷ್ಣ ಉಪಸ್ಥಿತರಿದ್ದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಸ್ವಾಗತಿಸಿದರು. ಈ ಛಾಯಾಚಿತ್ರ ಪ್ರದರ್ಶನ ಜನವರಿ 3 ರವರೆಗೆ ನಡೆಯಲಿದೆ.
ಪ್ರವಾಹ ಸಂತ್ರಸ್ತರ ನೋವಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯದ 22 ಜಿಲ್ಲೆಗಳ 103 ತಾಲ್ಲೂಕುಗಳ ಪ್ರವಾಹ ಪೀಡಿತ ಎಂದು ಘೋಷಣೆ, ಕೇಂದ್ರದಿಂದ 1200 ಕೋಟಿ ರೂ ಮಧ್ಯಂತರ ಪರಿಹಾರ ಬಿಡುಗಡೆ, ರಾಜ್ಯದಿಂದ 6,450 ಕೋಟಿ ಮಂಜೂರು. ಲೋಕೋಪಯೋಗಿ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಸಣ್ಣ ನೀರಾವರಿ ಇಲಾಖೆಯ ಹಲವು ಕಾರ್ಯಕ್ರಮಗಳು, ಶಾಲಾ ಕಟ್ಟಡ ದುರಸ್ತಿ, ಅನ್ನದಾತ ರೈತರ ಹಿತ ರಕ್ಷಣೆಗೆ ಆದ್ಯತೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೇಂದ್ರದಿಂದ 6 ಸಾವಿರ ರೂ, ರಾಜ್ಯ ಸರ್ಕಾರದಿಂದ 4 ಸಾವಿನ ನೆರವು, ಕುಡಿಯವ ನೀರು ಯೋಜನೆ, ಬೆಳೆ ನಷ್ಟ ಪರಿಹಾರಕ್ಕಾಗಿ ಪರಿಹಾರ ಬಿಡುಗಡೆ, ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಟ್ಟಡ ದುರಸ್ತಿಗೆ ಕ್ರಮ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಸಹಾಯ ಧನ,  ಸಾಮೂಹಿಕ ವಿವಾಹ ಏರ್ಪಡಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ಅಗತ್ಯ ಕ್ರಮ, ಕಾರ್ಮಿಕ ಇಲಾಖೆ ಕಾರ್ಯಕ್ರಮಗಳು ಹೀಗೆ ಹಲವು ಯೋಜನೆಗಳು ಕೈಗೊಂಡಿರುವ ವಿವಿಧ ಕಾರ್ಯಕ್ರಮ ಹಾಗೂ ಸಾಧನೆಗಳ ಮಾಹಿತಿ ಛಾಯಾಚಿತ್ರ ಪ್ರದರ್ಶನದಲ್ಲಿ ವೀಕ್ಷಿಸಬಹುದಾಗಿದೆ.

Also Read  ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು

error: Content is protected !!
Scroll to Top