ಕಲಬುರಗಿ: ನಿಂತಿದ್ದ ರೈಲು ಬೋಗಿಯಲ್ಲಿ ಅಗ್ನಿ ಅವಘಡ

ಕಲಬುರಗಿ, ಡಿ.2: ಇಲ್ಲಿನ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲೊಂದರ ಬೋಗಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತಡರಾತ್ರಿ ನಡೆದಿದೆ.‌

ಸರಕು ಸಾಗಾಣಿಕೆ ರೈಲ್ವೆಯ ಸಿಬ್ಬಂದಿಯ ವಿಶೇಷ ಬೋಗಿನಲ್ಲಿ  ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ರೈಲ್ವೆ ನಿಲ್ದಾಣ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.‌

ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದ್ದು, ಯಾವ ಕಾರಣಕ್ಕಾಗಿ ನಡೆಯಿತು ಎಂಬುದರ ಬಗ್ಗೆ ತನಿಖೆಯ ನಂತರ ತಿಳಿದು ಬರಲಿದೆ ಎಂದಿದ್ದಾರೆ.

Also Read  ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ

 

ಬೆಂಕಿಗೆ ಅನಾಹುತಕ್ಕೀಡಾದ ಬೋಗಿಯಲ್ಲೇ ಸಿಬ್ಬಂದಿ ಮಲಗುತ್ತಿದ್ದರು ಎನ್ನಲಾಗಿದ್ದು, ಅಗ್ನಿಶಾಮಕ ದಳದ ರಕ್ಷಣಾ ಕಾರ್ಯದಿಂದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top