ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಕೇಂದ್ರ ಸರ್ಕಾರದಿಂದ 2019-20ನೇ ಸಾಲಿನ ನಾರಿಶಕ್ತಿ ಪುರಸ್ಕಾರಕ್ಕೆ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಪುರಸ್ಕಾರವನ್ನು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿದ ಸಂಸ್ಥೆ ಮತ್ತು 25 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಂದ ಮುಕ್ತ ನಾಮಪತ್ರಗಳನ್ನು ವೆಬ್‍ಸೈಟ್‍ನಿಂದ ಪಡೆದು  ಜನವರಿ 7 ರೊಳಗೆ ಸಲ್ಲಿಸಬೇಕು. ಭಾರತ ಸರ್ಕಾರದ ಅಧಿಕೃತ ಜಾಲತಾಣದಲ್ಲಿ ಅರ್ಹ ನಾಮ ನಿರ್ದೇಶಿತರು ಪ್ರಸ್ತಾವನೆಗಳನ್ನು ಭಾರತ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಸದಸ್ಯರ ನೇಮಕ

error: Content is protected !!
Scroll to Top