ಪ.ಜಾತಿ/ಪ. ವರ್ಗದ ವಿದ್ಯಾರ್ಥಿವೇತನ : ಆನ್‍ಲೈನ್ ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   2019-2020ನೇ ಸಾಲಿನ ಪ.ಜಾತಿ/ಪ.ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಎಸ್.ಎಮ್.ಐ.ಎಸ್ ನಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ವಾರ್ಷಿಕ ಆದಾಯ ರೂ. 2.50 ಲಕ್ಷದೊಳಗೆ ಇರಬೇಕು. ಪ.ಜಾತಿ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ ಪ.ವರ್ಗದ ವಿದ್ಯಾರ್ಥಿಗಳು ಮ್ಯಾನುವಲ್ ಅರ್ಜಿಯನ್ನು ಇಲಾಖೆಯಿಂದ ಪಡೆದು ಭರ್ತಿ ಮಾಡಿ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅರ್ಹತೆ ; ಎಸ್.ಎಸ್.ಎಲ್.ಸಿ./ಪಿಯುಸಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿಬೇಕು, ಹೊರ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ./ಪಿಯುಸಿ ಉತ್ತೀರ್ಣರಾಗಿಬೇಕು, ಐಜಿಸಿಎಸ್‍ಇ ಬೋರ್ಡ್‍ನಿಂದ ಎಸ್.ಎಸ್.ಎಲ್.ಸಿ./ಪಿಯುಸಿ  ಉತ್ತೀರ್ಣರಾಗಿಬೇಕು, ರಾಪ್ಟ್ರೀಯ ಮುಕ್ತ ವಿಶ್ವವಿದ್ಯಾಯಲದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು ಹಾಗೂ ಹೊರ ರಾಜ್ಯದಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಅಗತ್ಯವಾದ ದಾಖಲೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ : ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮಂಗಳೂರು  ದೂರವಾಣಿ ಸಂಖ್ಯೆ 0824-2423619/2441226ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.

Also Read  ಕಾರು ಬಸ್ಸು ಢಿಕ್ಕಿ: ಕಡಬದ ವ್ಯಕ್ತಿ ಗಂಭೀರ

error: Content is protected !!
Scroll to Top