ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2    80ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಜನವರಿ 2 ರಿಂದ 6 ರವರೆಗೆ ಮೂಡುಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ.


ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕ್ರೀಡಾಕೂಡವು ನಡೆಯಲಿದೆ.  ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಯು ಸಂಜೆ 3 ಗಂಟೆಗೆ ಪ್ರಾರಂಭಗಲಿದೆ. ಕಾರ್ಯಕ್ರಮವನ್ನು ಕೇಂದ್ರ ಯುವಜನಸೇವೆ ಮತ್ತು ಕ್ರೀಡಾ ಸಚಿವ ಕಿರಣ್ ರಿಜ್ಯು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್‍ನಾರಾಯಣ್, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್  ಈಶ್ವರಪ್ಪ, ಪ್ರವಾಸೋಧ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ  ಸಿ.ಟಿ.ರವಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಸಮಾರೋಪ ಸಮಾರಂಭವು ಜನವರಿ 6 ರಂದು  ಸಂಜೆ 3 ಗಂಟೆಗೆ ನಡೆಯಲಿದೆ. ಈ ಬಾರಿಯ ಕ್ರೀಡಾಕೂಟದಲ್ಲಿ ದೇಶದ 400ಕ್ಕೂ ಅಧಿಕ ವಿಶ್ವವಿದ್ಯಾಲಯಗಳ ಸುಮಾರು 4000 ಅಥ್ಲೀಟ್‍ಗಳು ಹಾಗೂ 1000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ.

Also Read  ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ

Nk Kukke

 

error: Content is protected !!
Scroll to Top