ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ: ಆನ್‍ಲೈನ್ ಅರ್ಜಿ ಸಲ್ಲಿಕೆ ಕಡ್ಡಾಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಎನ್‍ಎಸ್‍ಪಿ ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP)ದಲ್ಲಿಯೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.  ಅರ್ಜಿ ಸಲ್ಲಿಸಲು ಕೊನೆಯ ಜನವರಿ 15ರ ವರೆಗೆ ದಿನ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.


SSP ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಓSPಯಲ್ಲಿ ಪಡೆದ ಐಡಿ ನಂ. ಕಡ್ಡಾಯವಾಗಿರುತ್ತದೆ. ಓSP ಮೂಲಕ  ಅರ್ಜಿ ಸಲ್ಲಿಸಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP)ದಲ್ಲಿ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರುಗೊಳ್ಳುವುದಿಲ್ಲ ಎಂದು  ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಸುಳ್ಯ: ನಾಳೆ (ಮಾ. 07) ವಿದ್ಯುತ್ ಕಡಿತ

error: Content is protected !!
Scroll to Top