ಬಳ್ಪ: ಚಿರತೆ ದಾಳಿಗೆ ವ್ಯಕ್ತಿ ಗಂಭೀರ



ಸುಬ್ರಹ್ಮಣ್ಯ, ಜ.2: ವ್ಯಕ್ತಿಯ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಕಡಬ ತಾಲೂಕಿನ ಬಳ್ಪಗ್ರಾಮದಲ್ಲಿ ಗುರುವಾರ ನಡೆದಿದೆ.
ಗಾಯಗೊಂಡವರನ್ನು ಕಾಯರ ನಿವಾಸಿ ಕೃಷಿಕ ಬಾಲಕೃಷ್ಣ ಎಂದು ಗುರುತಿಸಲಾಗಿದೆ.





ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಬಾಲಕೃಷ್ಣ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಗುರುವಾರ ಹಗಲು ಹೊತ್ತಲ್ಲಿ ನಡೆದಿದ್ದು ಕೃಷಿಕ ಬಾಲಕೃಷ್ಣ ಅವರು ಹುಲ್ಲು ತರಲೆಂದು ತೋಟಕ್ಕೆ ತೆರಳಿದ ವೇಳೆ ಈ ಘಟನೆ ಸಂಭವಿಸಿದೆ. ಇದರಿಂದ ಸ್ಥಳೀಯರು ಭೀತಿಗೊಂಡಿದ್ದಾರೆ.






Nk Kukke

error: Content is protected !!
Scroll to Top