ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ನಾಪತ್ತೆ ➤ ಮುಳುಗು ತಜ್ಞರಿಂದ ತೀವ್ರ ಶೋಧ



(ನ್ಯೂಸ್ ಕಡಬ) newskadaba.com ಕಡಬ, ಡಿ.03. ಠಾಣಾ ವ್ಯಾಪ್ತಿಯ ಕೊೈಲ ಗ್ರಾಮದ ನೀಡೇಲು ಎಂಬಲ್ಲಿ ಕುಮಾರಧಾರ ನದಿಯಲ್ಲಿ ಮುಳುಗಿ ಯುವಕನೋರ್ವ ನಾಪತ್ತೆಯಾದ ಘಟನೆ ಗುರುವಾರ ನಡೆದಿದೆ.





ನಾಪತ್ತೆಯಾದ ಯುವಕನನ್ನು ಕೊೈಲ ಗ್ರಾಮದ ಗುಲ್ಗೋಡಿ ನಿವಾಸಿ ರತ್ನಾಕರ ಕುಮಾರ್ ಯಾನೆ ಉದಯ ಪೂಜಾರಿ(32) ಎಂದು ಗುರುತಿಸಲಾಗಿದೆ. ಗುರುವಾರದಂದು ಸಂಜೀವ ಪೂಜಾರಿ ಮಾರಂಗ, ಹರೀಶ್ ಪಲ್ಲತ್ತಾರು, ಸತ್ಯಾ ರೈ ಸುಣ್ಣಾಡಿ, ಬೇಬಿ ಗೋಳಿತ್ತಡಿ ಎಂಬವರೊಂದಿಗೆ ನದಿಗೆ ತೆರಳಿದ್ದ ರತ್ನಾಕರ್ ನೀರಲ್ಲಿ ಮುಳುಗಿದ್ದಾರೆ. ತಕ್ಷಣವೇ ಮೆಲಕ್ಕೆತ್ತಲಾಲು ಪ್ರಯತ್ನಿಸಿದರೂ ರಕ್ಷಣೆ ಮಾಡಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ರತ್ನಾಕರ ಕುಮಾರ್ ಅವರ ಪತ್ನಿ ಚೈತ್ರಾ ನೀಡಿರುವ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕಡಬ ಎಸ್‍ಐ ರುಕ್ಮ ನಾಯ್ಕ್, ಎಎಸ್‍ಐ ರವಿ ಭೇಟಿ ನೀಡಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ನದಿಯಲ್ಲಿ ಶವಕ್ಕಾಗಿ ಹುಡುಕಾಟ ನಡೆಸಿದರೂ ಸಂಜೆಯ ವರೆಗೆ ಪತ್ತೆಯಾಗಲಿಲ್ಲ. ಶುಕ್ರವಾರ ಬೆಳಿಗ್ಗೆ ಮತ್ತೆ ಹುಡುಕಾಟ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.






error: Content is protected !!
Scroll to Top