ಕೆಎಸ್ಸಾರ್ಟಿಸಿ ಬಸ್-ಕಾರು ಢಿಕ್ಕಿ: ನಾಲ್ವರು ಸ್ಥಳದಲ್ಲೇ ಮೃತ್ಯು

ಮುಧೋಳ, ಜ.3: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ  ಶಿರೋಳ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಸಿದ್ದರಾಯ ತೇಲಿ (36), ಬಾಲಪ್ಪ ಸಂಡಗಿ (34), ಹನಮಂತ ಗನಗಾರ (21), ರಿಯಾಜ ಜಾಲಗೇರ (25) ಎಂದು ತಿಳಿದುಬಂದಿದೆ. ಇವರೆಲ್ಲರೂ ಜಮಖಂಡಿ ತಾಲೂಕಿನ ಗೋಠೆ ಗ್ರಾಮದವರೆಂದು ಹೇಳಲಾಗಿದೆ. ಮೃತರು ನ್ಯಾಯಲಯದ ವ್ಯಾಜ್ಯದ ನಿಮಿತ್ತ ಗೋಠಯಿಂದ ಧಾರವಾಡದ ಹೈಕೋರ್ಟ್ ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಬೆಳಗಾವಿಯಿಂದ ಕಲಬುರಗಿ ಮಾರ್ಗವಾಗಿ ತೆರಳುತಿದ್ದ ಬಸ್, ಕಬ್ಬಿನ ಟ್ರ್ಯಾಕ್ಟರ್ ಓವರ್ ಟೆಕ್ ಮಾಡುವ ಭರದಲ್ಲಿ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರಿಗೆ ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್

error: Content is protected !!
Scroll to Top