(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3 ಮಂಗಳೂರು ತಾಲೂಕು ಬಾಳ ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಜನವರಿ 04 ರಂದು ಬೆಳಿಗ್ಗೆ 11 ಗಂಟೆಗೆ ಬಾಳ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.