ಶಾಸ್ತ್ರೀಯ ಮತ್ತು ಜಾನಪದ ನೃತ್ಯ ತರಬೇತಿ ತರಗತಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3    ಚೂಂತಾರು ಸರೋಜಿನಿ ಭಟ್ ಪ್ರತಿಪ್ಠಾನ(ರಿ) ಮಂಗಳೂರು ಮತ್ತು ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಶಾಸ್ತ್ರೀಯ ಮತ್ತು ಜಾನಪದ ನೃತ್ಯ ತರಗತಿ ನಗರದ ಬಿಜೈ ಕಾಪಿಕಾಡಿನಲ್ಲಿರುವ ಹಕೂನ ಮಟಾಟ ಕ್ಲಬ್ ಇದರಲ್ಲಿ ದಿನಾಂಕ 05/01/2020ನೇ ಭಾನುವಾರದಂದು ಉದ್ಘಾಟನೆಗೊಳ್ಳಲಿದೆ.

ಶ್ರೀ ದಯಾನಂದ ಕತ್ತಲ್‍ಸಾರ್, ಅಧ್ಯಕ್ಷರು, ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಸರಕಾರ ಇವರು ಈ ತರಗತಿಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿದುಷಿ ಶ್ರೀಮತಿ ಯೋಗೇಶ್ವರಿ ಜಯಪ್ರಕಾಶ್, ನಿರ್ದೇಶಕರು, ವೈಷ್ಣವಿ ನಾಟ್ಯಾಲಯ ಪುತ್ತೂರು ಇವರು ಭಾಗವಹಿಸಲಿದ್ದಾರೆ. ಚೂಂತಾರು ಸರೋಜಿನಿ ಪ್ರತಿಷ್ಠಾನ(ರಿ) ಮಂಗಳೂರು ಇದರ ಗೌರವ ಅಧ್ಯಕ್ಷರಾದ ಚೂಂತಾರು ಲಕ್ಷ್ಮೀ ನಾರಾಯಣ ಭಟ್ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರಗಲಿದೆ ಎಂದು ಚೂಂತಾರು ಪ್ರತಿಷ್ಠಾನದ ಕಾರ್ಯದರ್ಶಿ ಡಾ|ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಮಾರಿ ಸ್ನೇಹ ಭಟ್ ಚೂಂತಾರು ಈ ತರಗತಿಗಳನ್ನು ನಿರ್ವಹಿಸಲಿದ್ದಾರೆ ಮತ್ತು ಆಸಕ್ತರು ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ – 9741182254.

error: Content is protected !!

Join the Group

Join WhatsApp Group