ಕಡಬ: ಸ್ವಿಫ್ಟ್ ಕಾರು – ಟಿಪ್ಪರ್ ನಡುವೆ ಢಿಕ್ಕಿ ➤ ಕಾರಿನ ಮುಂಭಾಗ ಜಖಂ

(ನ್ಯೂಸ್ ಕಡಬ) newskadaba.com ಕಡಬ, ಜ.03. ಸ್ವಿಫ್ಟ್ ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಜಖಂಗೊಂಡ ಘಟನೆ ಪಂಜದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

Nk Kukke

ಕಡಬದಿಂದ ನಿಂತಿಕಲ್ಲು ಕಡೆಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಟಿಪ್ಪರ್ ನಡುವೆ ಪಂಜ ಸಮೀಪದ ಕರಿಕ್ಕಳ ಕೃಷ್ಣನಗರ ಎಂಬಲ್ಲಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.

Scroll to Top