(ನ್ಯೂಸ್ ಕಡಬ) newskadaba.com ಮ0ಗಳೂರು ಮೇ.26. ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೇ 30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ 4.30 ಗಂಟೆವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕರು, ಎಸಿಬಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಮೇ.30: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ದೂರು ಸ್ವೀಕಾರ
