ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಉರುಳಿದ ಬಸ್

ಉಪ್ಪಿನಂಗಡಿ, ಜ.4: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಅಮೈ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

 

 

 

 

 

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಅಮೈ ಕಿರು ಸೇತುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಉರುಳಿದ್ದು, ಘಟನೆಯಿಂದಾಗಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿ ಒಟ್ಟು 27 ಮಂದಿ ಪ್ರಯಾಣಿಕರಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Also Read  ಮಂಗಳೂರು: ಅನ್ಯಕೋಮಿನ ವಿದ್ಯಾರ್ಥಿಗಳಿಬ್ಬರು ಮಾತನಾಡುತ್ತಿದ್ದ ವೇಳೆ ತಂಡದಿಂದ ಹಲ್ಲೆ...! ➤ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

ಘಟನೆಯಲ್ಲಿ ಬಸ್ಸಿನ ಒಂದು ಪಾರ್ಶ್ವಕ್ಕೆ ಹಾನಿಯಾಗಿದ್ದು, ರಾತ್ರಿಯೇ ಬಸ್‌ನ್ನು ಮೇಲಕ್ಕೆತ್ತಲಾಗಿದೆ

 

error: Content is protected !!
Scroll to Top