ಜ.9 ರಂದು  ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4  ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ 2019-20ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜನವರಿ 9 ರಂದು ಬೆಳಿಗ್ಗೆ 10 ಗಂಟೆಗೆ  ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ.


ಸಾಂಸ್ಕೃತಿಕ ಸ್ಪರ್ಧೆ ಜನವರಿ 10 ರಂದು ಬೆಳಿಗ್ಗೆ 9.30 ಗಂಟೆಗೆ ಸರಕಾರಿ ನೌಕರರ ಸಭಾಭವನ ಮಂಗಳೂರು ಇಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಛಿಸುವ ಎಲ್ಲಾ ಖಾಯಂ ಸರಕಾರಿ ನೌಕರರು ತಮ್ಮ ಭಾವಚಿತ್ರದೊಂದಿಗೆ ಇಲಾಖೆಯ ಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ವಯಸ್ಸಿನ ದೃಢೀಕರಣವುಳ್ಳ ಪ್ರಮಾಣ ಪತ್ರ ತರಬೇಕು, ಕ್ರೀಡಾಕೂಟದಲ್ಲಿ ಭಾಗವಹಿಸುವವರು ಕ್ರೀಡಾಪಟುಗಳ ಪಟ್ಟಿಯನ್ನು ಇಲಾಖೆ/ಕಚೇರಿಯ ಮುಖ್ಯಸ್ಥರ ದೃಢೀಕರಣದೊಂದಿಗೆ ಕ್ರೀಡಾ ಇಲಾಖೆಗೆ ಸಲ್ಲಿಸಬೇಕು.  ಸರಕಾರಿ ನೌಕರರು ಸ್ಪರ್ಧೆ ನಡೆಯುವ ದಿನದಂದು ಬೆಳಿಗ್ಗೆ 9.30 ಗಂಟೆಯೊಳಗೆ ಸೂಚಿಸಿದ ಸ್ಥಳದಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ. ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳ ಕ್ರೀಡಾಂಗಣ, ಮಂಗಳೂರು ದೂರವಾಣಿ ಸಂಖ್ಯೆ : 0824-2451264 ಸಂಪರ್ಕಿಸಬಹುದು.

Also Read  ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ

error: Content is protected !!
Scroll to Top