ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜ.04. ಶಾಲೆ‌ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ತಡೆದು ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ದೋಳ್ಪಾಡಿ ಗ್ರಾಮದ ಕಳೆಂಜೋಡಿ ನಿವಾಸಿ ರುಕ್ಮಯ್ಯ ಪೂಜಾರಿ ಎಂಬವರ ಪುತ್ರ ಲಿಂಗಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿಯು ಕಡಬದ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದನು. ಈ ಬಗ್ಗೆ ಬಾಲಕಿಯು ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Also Read  ಆರೋಪಿ ರಾಣಾ ಬಾರತಕ್ಕೆ ಹಸ್ತಾಂತರ ಸಾಧ್ಯತೆ.!

error: Content is protected !!
Scroll to Top