ಜೆಎನ್‌ಯು ವಿದ್ಯಾರ್ಥಿಗಳು, ಉಪನ್ಯಾಸಕರ ಮೇಲೆ ದಾಳಿ: ಮೋದಿ, ಶಾ ಕಾರಣ; ಪ್ರಿಯಾಂಕ ಗಾಂಧಿ

ಹೊಸದಿಲ್ಲಿ, ಜ.6: ಇಲ್ಲಿನ ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯ(ಜೆಎನ್‌‌‌ಯು)ಯಲ್ಲಿ ರವಿವಾರ ರಾತ್ರಿ ಅಮಾಯಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಮೇಲೆ ನಡೆದ ದಾಳಿಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಗೂಂಡಾಗಳು ಕಾರಣ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

Nk Kukke

ರವಿವಾರ ರಾತ್ರಿ ಜೆಎನ್ ಯು ಕ್ಯಾಂಪಸ್ ಒಳಗೆ ನುಗ್ಗಿದ್ದ ಹಲವು ಮುಸುಕುಧಾರಿಗಳು ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಉಪನ್ಯಾಸಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆಗೆ ಕ್ಯಾಂಪಸ್ ನ ಆಸ್ತಿ ಪಾಸ್ತಿ ಹಾನಿ ಮಾಡಲಾಗಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮೋದಿ ಮತ್ತು ಅಮಿತ್ ಶಾ ವಿದ್ಯಾರ್ಥಿಗಳಲ್ಲಿ ಭಯ ಮೂಡಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಪ್ರಿಯಾಂಕ ಗಾಂಧಿ ಇಂದು ಮುಂಜಾನೆ ಆಸ್ಪತ್ರೆಗೆ ಭೆಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

Also Read  ಬಿಜೆಪಿ ಮುಖಂಡನ ಗುಂಡಿಕ್ಕಿ ಕೊಂದ ಅಪರಿಚಿತ ದುಷ್ಕರ್ಮಿಗಳು

ದಿಲ್ಲಿಯ ಜೆಎನ್ ಯುವಿನಲ್ಲಿ ನಡೆದ ಈ ಘಟನೆಯನ್ನು ಖಂಡಿಸುತ್ತಿರುವ ಕಾಂಗ್ರೆಸ್ ನಾಯಕರು, ಪೊಲೀಸರು ಸರಿಯಾದ ಭದ್ರತೆ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಎಬಿವಿಪಿ ಕಾರ್ಯಕರ್ತರು ಈ ಹಲ್ಲೆ ಮಾಡಿ ಪರಾರಿಯಾಗಿದ್ದಾರೆಂದು ಜೆಎನ್ ಯು ವಿದ್ಯಾರ್ಥಿ ಸಂಘ ಆರೋಪಿಸಿದೆ.

error: Content is protected !!
Scroll to Top