ಹಿರಿಯ ಪತ್ರಕರ್ತ ರವಿರಾಜ್ ವಳಳಾಂಬೆ ನಿಧನ

ಉಡುಪಿ, ಜ.8 : ಹಿರಿಯ ಪತ್ರಕರ್ತ ರವಿರಾಜ್ ವಳಳಾಂಬೆ ಅವರು ಮಂಗಳವಾರ ತಡ ರಾತ್ರಿ ಉಡುಪಿಯ‌ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಹೃದಯಘಾತದಿಂದ ನಿಧನ‌ ಹೊಂದಿದ್ದಾರೆ.

ಎದೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅಸುನೀಗಿದ್ದಾರೆ.

ಉಡುಪಿಯಲ್ಲಿ ಈ‌ಟಿವಿ ವರದಿಗಾರನಾಗಿ ಹಲವು ವರ್ಷಗಳ‌ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ವರದಿಗಾರನಾಗಿ‌ ಕೆಲಸ ಮಾಡಿ ಬಳಿಕ‌ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು‌ಮಿತ್ರರನ್ನು ಅಗಲಿದ್ದಾರೆ.

Also Read  ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ದೀಪಾವಳಿ ಲಕ್ಕೀ ಕೂಪನ್ ಡ್ರಾ ➤ ಈ 250 ಅದೃಷ್ಟಶಾಲಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ..?

 

error: Content is protected !!
Scroll to Top