ನಿವೃತ್ತ ಯೋಧ, ಬಿಳಿನೆಲೆ ಸಿ.ಎ. ಬ್ಯಾಂಕ್ ಅಧ್ಯಕ್ಷ ಬಾಲಕೃಷ್ಣ ಗೌಡ ವಾಲ್ತಾಜೆ ನಿಧನ



(ನ್ಯೂಸ್ ಕಡಬ) newskadaba.com ಕಡಬ, ಜ.08. ಬಿಳಿನೆಲೆ ಸಿ.ಎ. ಬ್ಯಾಂಕ್ ಅಧ್ಯಕ್ಷ, ನಿವೃತ್ತ ಯೋಧ, ನೆಟ್ಟಣ ವಾಲ್ತಾಜೆ ನಿವಾಸಿ ಬಾಲಕೃಷ್ಣ ಗೌಡ (50) ಅವರು ಇಂದು (ಜ.8) ಮಧ್ಯಾಹ್ನ ಹೃದಯಾಘಾತದಿಂದ ನಿಧನ ಹೊಂದಿದರು.







ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು, ಯುದ್ಧದ ವೇಳೆ ಅವರ ಒಂದು ಕಣ್ಣಿಗೆ ಹಾನಿಯಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.






error: Content is protected !!
Scroll to Top