ಮತದಾರರ ಮಿಂಚಿನ ನೋಂದಣಿ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಜಿಲ್ಲಾದ್ಯಂತ ಮಿಂಚಿನ ನೋಂದಣಿ ಕಾರ್ಯಕ್ರಮವು ಪ್ರಾರಂಭವಾಗಿದ್ದು, ಈ ಕಾರ್ಯಕ್ರಮವು ಜನವರಿ 10 ರವರೆಗೆ ವಿಸ್ತರಣೆಗೊಂಡಿದೆ.

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಜನವರಿ 15ರಂದು ಕೊನೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಕಲಚೇತರನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನೂಕೂಲಕ್ಕಾಗಿ ವಿಸ್ತರಣೆಗೊಂಡಿದೆ, ನೊಂದಣಿ ಅಭಿಯಾನವು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top