ಜ.11: ಒರುಂಬಾಳು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.9    ನೂಜಿಬಾಳ್ತಿಲ ಗ್ರಾಮದ ಒರುಂಬಾಳು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಗಣಹೋಮ ಕಾರ್ಯಗಳು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.11ರಂದು ನಡೆಯಲಿದೆ.


ಜ.10ರಂದು ಭಕ್ತಾಧಿಗಳಿಂದ ಕ್ಷೇತ್ರಕ್ಕೆ ಹಸುರುವಾಣಿ ಸಮರ್ಪಣೆ ನಡೆಯಲಿದೆ. ಜ.11ರಂದು ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ ಬಳಿಕ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳಿಗೆ ತಂಬಿಲ ಸೇವೆ ನಡೆದು ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

Nk Kukke

Scroll to Top