ಜನವರಿ 19ರಂದು ಪೊಲಿಯೋ ಲಸಿಕೆ ಅಭಿಯಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ಮಕ್ಕಳನ್ನು ಮಾರಕ ರೋಗದಿಂದ ತಪ್ಪಿಸಲು ತಂದೆ-ತಾಯಿಗಳು, ಪೋಷಕರು ಪಲ್ಸ್ ಪೋಲಿಯೋ ಲಸಿಕೆಯನ್ನು ಮಕ್ಕಳಿಗೆ ಅಗತ್ಯವಾಗಿ ಹಾಕಿಸಬೇಕು ಎಂದು ಮಂಗಳೂರು ಉಪತಹಸೀಲ್ದಾರ್  ವತ್ಸಲಾ ತಿಳಿಸಿದರು.

ನಗರದ ತಾಲೂಕು ಕಚೇರಿಯಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪಲ್ಸ್ ಪೋಲಿಯೋ ಲಸಿಕೆಯು ಮಹತ್ವವಾಗಿದ್ದು ಇದಕ್ಕೆ ಎಲ್ಲಾ ಇಲಾಖೆಯ ಸಿಬ್ಬಂದಿ ವರ್ಗವು ಕೈ ಜೋಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ತಾಲ್ಲೂಕು ಆರೋಗ್ಯಧಿಕಾರಿ ಡಾ. ಸುಜಯ್, ಪೋಲಿಯೋ ಲಸಿಕೆ ಮಕ್ಕಳಿಗೆ ಅತ್ಯಂತ ಅಮೂಲ್ಯವಾದದ್ದು ಇದರ ಸದುಪಯೋಗವನ್ನು ಗ್ರಾಮೀಣ ಮತ್ತು ನಗರ ಪ್ರದೇಶದ ಮಕ್ಕಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು. 2019-20 ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ಜನವರಿ 19 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. ಪೋಲಿಯೋ ಲಸಿಕೆ ಪಡೆಯಲು ಬೂತ್‍ಗೆ ಬರದಂತಹ ಗ್ರಾಮೀಣ ಮತ್ತು ನಗರ ಪ್ರದೇಶದ ಮಕ್ಕಳಿಗೆ  ಮನೆ ಮನೆಗೆ ಭೇಟಿ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು. ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Also Read  ಟ್ರಬಲ್ ಶೂಟರ್ ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ ➤ ಡಿಕೆಶಿಯಿಂದ ಅಧಿಕಾರ ಸ್ವೀಕಾರ

error: Content is protected !!
Scroll to Top