ಪೌರತ್ವ ಕಾಯ್ದೆ ಜಾರಿ: ಅಧಿಸೂಚನೆ ಹೊರಡಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ದೇಶಾದ್ಯಂತ ಭಾರಿ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯಿದೆ ಜ.10ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಈ ಸಂಬಂಧ ಗೆಜೆಟ್‌ ಅಧಿಸೂಚನೆ ಹೊರಬಿದ್ದಿದೆ.

ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನದಲ್ಲಿ ಧಾರ್ಮಿಕ ಶೋಷಣೆಗೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿಗೃಹ ಸಚಿವಾಲಯ ತಿಳಿಸಿದೆ.
2014ರ ಡಿ.31ಕ್ಕೆ ಮುನ್ನ ಭಾರತಕ್ಕೆ ಬಂದ ಮುಸ್ಲಿಮೇತರರ ವಲಸಿಗರಿಗೆ ಈ ಕಾಯಿದೆ ಅಡಿ ಪೌರತ್ವ ಲಭ್ಯವಾಗಲಿದೆ. ಆದರೆ, ಕಾಯಿದೆಗೆ ಸಂಬಂಧಿಸಿದ ನೀತಿ-ನಿಯಮಗಳೇನು ಎಂಬುದನ್ನು ಸರಕಾರ ಇನ್ನೂ ಬಯಲುಮಾಡಿಲ್ಲ.

ಪೌರತ್ವ ತಿದ್ದುಪಡಿ ಕಾಯಿದೆ ಕಳೆದ ಡಿಸೆಂಬರ್‌ 11ರಂದು ಸಂಸತ್ತಿನಲ್ಲಿ ಅನುಮೋದನೆ ದೊರೆತಿತ್ತು. ಡಿಸೆಂಬರ್‌ 14ರಂದು ರಾಷ್ಟ್ರಪತಿ ಅಂಕಿತ ಕೂಡ ಸಿಕ್ಕಿತು. ಈ ಕಾಯಿದೆ ವಿರುದ್ಧ ದೇಶಾದ್ಯಂತ ಬಾರಿ ಪ್ರತಿಭಟನೆ, ವಿರೋಧ ವ್ಯಕ್ತವಾಗಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ.

Also Read  ಇಂದಿನಿಂದ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ..!

error: Content is protected !!
Scroll to Top