ಹಿರಿಯ ಸಾಹಿತಿ, ಸಂಶೋಧಕ ಚಿದಾನಂದ ಮೂರ್ತಿ ನಿಧನ

ಬೆಂಗಳೂರು, ಜ.11: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ.ಚಿದಾನಂದಮೂರ್ತಿ ಇಂದು ಮುಂಜಾನೆ ಬೆಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಸಾಹಿತ್ಯ, ಸಂಶೋಧನೆ ಮತ್ತು ಇತಿಹಾಸ ಕ್ಷೇತ್ರದಲ್ಲಿ  ಸೇವೆ ಸಲ್ಲಿಸಿರುವ ಚಿದಾನಂದ ಮೂರ್ತಿಯವರಿಗೆ ರಾಜ್ಯೋತ್ಸವ ಸೇರಿ ಹಲವು ಪ್ರಶಸ್ತಿಗಳು ಲಭಿಸಿವೆ.  ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಬೇಕೆಂದು ಹೋರಾಟ ಮಾಡಿದವರಲ್ಲಿ ಚಿ.ಮೂ ಪ್ರಮುಖರು. ಹಂಪಿ ಸ್ಮಾರಕಗಳ ರಕ್ಷಣೆಗಾಗಿ ಚಿದಾನಂದಮೂರ್ತಿ ನಿರಂತರ ಹೋರಾಟ ಮಾಡಿದ್ದರು. ಸಂಶೋಧಕರಾಗಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಪ್ರಾಧ್ಯಾಪಕರಾಗಿಯೂ ಚಿದಾನಂದ ಮೂರ್ತಿ ಸೇವೆ ಸಲ್ಲಿಸಿದ್ದರು. ಇಂದು ಬೆಳಗ್ಗೆ 9 ಗಂಟೆಯ ನಂತರ ವಿಜಯನಗರದ ಆರ್​ಪಿಸಿ ಲೇಔಟ್​ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Also Read  'ಕಬ್ಬನ್‌ ಪಾರ್ಕ್‌'ನಲ್ಲಿ ಹೊಸ ರೂಲ್ಸ್‌ ಜಾರಿ..!   ➤ ಪಾರ್ಕ್‌ನಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ್ರೆ 'ಲಾಠಿ ಚಾರ್ಜ್‌ ಫಿಕ್ಸ್'!  

error: Content is protected !!
Scroll to Top