9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ► ರಾಜ್ಯದಲ್ಲೊಂದು ಭೀಕರ ಅಮಾನುಷ ಘಟನೆ

(ನ್ಯೂಸ್ ಕಡಬ ) newskadaba.com ಚಿಕ್ಕಬಳ್ಳಾಪುರ, ಆ 24, ಮನೆಯಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿರುವ ಕಾಮುಕರು, ಬಾಲಕಿ ಮೇಲೆ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿರುವ ಅಮಾನುಷ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗ್ರಾಮದ 9 ವರ್ಷದ ಬಾಲಕಿಯನ್ನು ಅಪಹರಿಸಿರುವ ದುಷ್ಕರ್ಮಿಗಳು, ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮನೆಯಲ್ಲಿ ಮಲಗಿದ್ದ ಬಾಲಕಿ ನಾಪತ್ತೆಯಾದ ನಂತರ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ರೂ ಪತ್ತೆಯಾಗಿರಲಿಲ್ಲ. ರಾತ್ರಿ ನಾಪತ್ತೆಯಾದ ಬಾಲಕಿ ಬೆಳಗ್ಗೆ ಗ್ರಾಮದ ಹೊರವಲಯದ ತೋಟವೊಂದರ ಬಳಿಯ ಪೊದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಅರೆ ನಗ್ನ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಮೈ ಮೇಲೆ ತರಚಿದ ಗಾಯಗಳಾಗಿದ್ದು, ಕತ್ತು ಹಿಸುಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸ್ಥಳಕ್ಕೆ ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top