ಮಂಗಳೂರು: ದಾಖಲೆ ಇಲ್ಲದ ವಿದೇಶಿ ಕರೆನ್ಸಿ ವಶ

ಮಂಗಳೂರು, ಜ.11: ದಾಖಲೆ ಇಲ್ಲದ ಸುಮಾರು 5,48,000 ರೂಪಾಯಿಯ ವಿದೇಶಿ ಕರೆನ್ಸಿಗಳನ್ನು ಹೊಂದಿದ್ದ ದುಬೈಗೆ ಸಂಚರಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Nk Kukke

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಫ್‌ಎಸ್‌ಎಫ್ ಅಧಿಕಾರಿಗಳು ಶನಿವಾರ ಮುಂಜಾನೆ 6.30 ಗಂಟೆಗೆ ಪ್ರಯಾಣಿಕರ ಬ್ಯಾಗೇಜುಗಳ ತಪಾಸಣೆ ಮಾಡುತ್ತಿದ್ದ ವೇಳೆ ದುಬೈಗೆ ಸ್ಪಯ್ಸ್ ಜೆಟ್ ವಿಮಾನದ ಮೂಲಕ ತೆರಳಲಿದ್ದ ಪ್ರಯಾಣಿಕ ಶಾಹುಲ್ ಹಮೀದ್‌ ಎಂಬವರ ಕೈ ಚೀಲದಲ್ಲಿ ಅನುಮಾನಾಸ್ಪದ ಚಿತ್ರವನ್ನು ಗಮನಿಸಿದ್ದು ಪರಿಶೀಲನೆ ನಡೆಸಿ ವಿದೇಶಿ ಕರೆನ್ಸಿಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರಯಾಣಿಕನಿಂದ ಯುಎಸ್ ಡಾಲರ್ , ಚೀನೀ ಕರೆನ್ಸಿ, ಮಲೇಷ್ಯಾ ಕರೆನ್ಸಿ, ಟರ್ಕಿ ಕರೆನ್ಸಿ ಸೇರಿದಂತೆ ಅಂದಾಜು 5,48,000 ರೂಪಾಯಿಯೊಂದಿಗೆ ಆತನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Also Read  ಬಂಟ್ವಾಳ: ದೇಶದಲ್ಲೇ ಮೊದಲ ಬಾರಿಗೆ 'ಉಸ್ನೆಯ ಹಿರುಟ' ಕಲ್ಲು ಹೂವು ಪತ್ತೆ !

error: Content is protected !!
Scroll to Top