(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11 ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಿದೆ. ಜನವರಿ 13 ರಂದು ಮಧ್ಯಾಹ್ನ 2 ಗಂಟೆಗೆ ಅಕಾಡೆಮಿ ಸಿರಿಚಾವಡಿಯಲ್ಲಿ ಹಿರಿಯ ಸಾಹಿತಿ ಮತ್ತು ಬಹುಭಾಷಾ ಕವಿ ಮಹಮ್ಮದ್ ಬಡ್ಡೂರು ಇವರನ್ನು ಸನ್ಮಾನಿಸಲಾಗುವುದು ಹಾಗೂ ‘ಸಿರಿದೊಂಪ – ತುಡರ್ ಎರಡು ಪುಸ್ತಕ’ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಮಹಮ್ಮದ್ ಬಡ್ಡೂರು ಇವರನ್ನು ಸನ್ಮಾನಿಸಲಿರುವರು. ‘ಸಿರಿದೊಂಪ – ತುಡರ್ ಎರಡು’ ಪುಸ್ತಕವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇಲ್ಲಿಯ ಉಪನಿರ್ದೇಶಕ ಶೇಷಶಯನ ಕೆ. ಕಾರಿಂಜ ಬಿಡುಗಡೆ ಮಾಡಲಿರುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು, ಸಾಹಿತಿಗಳು, ಕಲಾವಿದರು, ವಿದ್ವಾಂಸರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ರಾಜೇಶ್. ಜಿ ಇವರ ಪ್ರಕಟಣೆ ತಿಳಿಸಿದೆ.