ಮುಂಬೈ, ಜ.12: ಮುಂಬೈನಿಂದ 100 ಕಿ.ಮೀ ದೂರದಲ್ಲಿರುವ ಪಾಲ್ಗಾರ್ ಜಿಲ್ಲೆಯ ತಾರಾಪುರದ ನೈಟ್ರೇಟ್ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಸ್ಫೋಟ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಾರಾ ಘಟಕದಲ್ಲಿದ್ದ ರಿಯಾಕ್ಟರ್ ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟಕದಲ್ಲಿ ಇನ್ನು ಹಲವು ಸಿಲುಕಿಕೊಂಡಿದ್ದು ಅವರ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

Also Read  ಕೇರಳದ ಮಾಜಿ ಮುಖ್ಯಮಂತ್ರಿ ಊಮನ್ ಚಾಂಡಿ ವಿಧಿವಶ