ಉಪ್ಪಿನಂಗಡಿ: ಯುವತಿಯರನ್ನು ಬಳಸಿ ಹನಿಟ್ರ್ಯಾಪ್ ಪ್ರಕರಣ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.13. ನಾಲ್ಕು ದಿನಗಳ ಹಿಂದೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ವಿಟ್ಲ ಕಸಬಾ ಗ್ರಾಮದ ಕಡಂಬು ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಜಮಾಲುದ್ದೀನ್, ಕೊಡಗು ಜಿಲ್ಲೆಯ ಕುಶಾಲನಗರ ನಿವಾಸಿ ಬಿ.ಎಂ. ಭಾಸ್ಕರ್ ಎಂಬವರ ಪುತ್ರ ಲೋಹಿತ್ ಹಾಗೂ ವಿಟ್ಲ ಕಸಬಾ ಗ್ರಾಮದ ನೆತ್ತರಕೆರೆ ಕೆದುಮೂಲೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಆರೋಪಿಗಳು ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಜಾಲದಲ್ಲಿ ತೊಡಗಿಸಿಕೊಂಡಿದ್ದರು. ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ.

Also Read  ಅಪಾರ್ಟ್ ಮೆಂಟ್ ಒಂದರ ಐದನೇ ಮಹಡಿಯಿಂದ ಕೆಳಗೆಬಿದ್ದು ಎರಡು ವರ್ಷದ ಮಗು ಮೃತ್ಯು..!

error: Content is protected !!
Scroll to Top