ಮಂಗಳೂರು: ಸ್ಕೂಟರ್ ಸ್ಕಿಡ್; ವಿದ್ಯಾರ್ಥಿ ಮೃತ್ಯು

ಮಂಗಳೂರು, ಜ.13: ಸ್ಕೂಟರ್ ಸ್ಕಿಡ್ ಆದ ಪರಿಣಾಮ ಸವಾರ ವಿದ್ಯಾರ್ಥಿ ಮೃತಪಟ್ಟ ಘಟನೆ ನಗರದ ಹಂಪನಕಟ್ಟೆ ಬಳಿ ರವಿವಾರ ರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿ ಮುಹಮ್ಮದ್ ಉಮರ್(18 )ಎಂದು ಗುರುತಿಸಲಾಗಿದೆ. ವಾಮಂಜೂರಿನ‌ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾನೆ. ಉಮರ್ ರವಿವಾರ ರಾತ್ರಿ ಹಂಪನಕಟ್ಟೆ ಬಳಿ ದ್ವಿಚಕ್ರದಲ್ಲಿ ಸಾಗುತ್ತಿರುವಾಗ ತನ್ನ ವಾಹನ ಸ್ಕಿಡ್ ಆದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ‌ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Also Read  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)- ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

 

error: Content is protected !!
Scroll to Top