ಕೋಸ್ಟಲ್‌ವುಡ್‌‌ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ “ಇಂಗ್ಲೀಷ್” ತುಳು ಸಿನಿಮಾ ಎಪ್ರಿಲ್ 3ರಂದು ದೇಶ-ವಿದೇಶಗಳಲ್ಲಿ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.13    ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸುತ್ತಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ ಇಂಗ್ಲಿಷ್ ತುಳು ಸಿನಿಮಾ ಎಪ್ರಿಲ್ 3ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಪುಣೆ, ಮುಂಬೈ ಹಾಗೂ ಗಲ್ಫ್‌ ರಾಷ್ಟ್ರಗಳಲ್ಲಿ ಏಕಕಾಲದಲ್ಲೇ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ ತಿಳಿಸಿದ್ದಾರೆ.

Nk Kukke

ಈಗಾಗಲೇ ಎಕ್ಕಸಕ, ಪಿಲಿಬೈಲ್ ಯಮುನಕ್ಕ, ಅಮ್ಮೆರ್ ಪೊಲೀಸ್ ಮುಂತಾದ ಯಶಸ್ವಿ ಚಿತ್ರವನ್ನು ನಿರ್ದೇಶಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಧೂರಿ ಬಜೆಟ್ ನಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರ ಕೋಸ್ಟಲ್‌ವುಡ್‌ನಲ್ಲಿ ಬಹಳಷ್ಟು ನಿರೀಕ್ಷೆ ಮೂಡಿಸಿದೆ. ಮಾತ್ರವಲ್ಲದೇ ಈ ಸಿನಿಮಾದಲ್ಲಿ ಖ್ಯಾತ ನಟ ಅನಂತನಾಗ್ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸುವ ಮೂಲಕ ಪ್ರಥಮ ಬಾರಿಗೆ ತುಳು ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಾರ್ಚ್ 22, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ, ಯಾನ ಮೊದಲಾದ ಕನ್ನಡ ಸಿನಿಮಾಗಳನ್ನು ನಿರ್ಮಿಸಿರುವ ದುಬೈಯ ಖ್ಯಾತ ಉದ್ಯಮಿ ಶ್ರೀ ಹರೀಶ್ ಶೇರಿಗಾರ್ ಅವರು ಮೊದಲ ಬಾರಿಗೆ ತುಳು ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಉತ್ತಮ ಕಥಾ ಸಾರಂಶವನ್ನು ಹೋದಿರುವ “ಇಂಗ್ಲಿಷ್” ತುಳು ಸಿನಿಮಾವನ್ನು ಓರ್ವ ಉತ್ತಮ ನಿರ್ಮಾಪಕರ ಜೊತೆ ನಿರ್ಮಾಣ ಮಾಡುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ದುಬೈಯಲ್ಲಿ ಖ್ಯಾತ ಉದ್ಯಮಿಯಾಗಿದ್ದು, ಉತ್ತಮ ಗಾಯಕರೂ ಆಗಿರುವ ಕೊಡುಗೈ ದಾನಿ ಹರೀಶ್ ಶೇರಿಗಾರ್ ಅವರು ಈಗಾಗಲೇ ಸ್ಯಾಂಡಲ್‌ವುಡ್‍‍ನಲ್ಲಿ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದು, ಇದೀಗ ತಮ್ಮ ಮಾತೃ ಭಾಷೆ ತುಳು ಭಾಷೆಯ ಅಭಿಮಾನದಿಂದ ತುಳು ಬಾಷೆಯಲ್ಲಿ ಚಿತ್ರ ನಿರ್ಮಾಣಕ್ಕೆ ಬಂದಿರುವುದು ತುಳು ಸಿನಿಮಾ ರಂಗಕ್ಕೆ ಶಕ್ತಿ ತುಂಬಿದಂತಾಗಿದೆ ಎಂದು ಸೂರಜ್ ಶೆಟ್ಟಿ ತಿಳಿಸಿದ್ದಾರೆ. ನನ್ನ ತಾಯಿನಾಡಿನ ಭಾಷೆಯಲ್ಲಿ ಚಿತ್ರ ಮಾಡಬೇಕೆಂಬ ನನ್ನ ಬಹುದಿನಗಳ ಅಶೆಯಂತೆ ಒಂದು ಉತ್ತಮ ಕಥಾಹಂದರವನ್ನು ಹೊಂದಿರುವ ತುಳು ಚಿತ್ರವನ್ನು ನಿರ್ಮಿಸುತ್ತಿದ್ದೇನೆ.ಹಿರಿಯ ನಟ ಅನಂತ್ ನಾಗ್ ಅವರು ಈ ಚಿತ್ರದಲ್ಲಿ ನಟಿಸಲು ಒಪ್ಪಿರುವುದು ನನ್ನ ಸೌಭಾಗ್ಯವೇ ಸರಿ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಚಿತ್ರ ಉತ್ತಮವಾಗಿ ಮೂಡಿ ಬರುತ್ತಿದೆ. ಚಿತ್ರಕ್ಕೆ ತಮ್ಮೆಲ್ಲರ ಪ್ರೋತ್ಸಾಹ ಅಗತ್ಯವಾಗಿ ಬೇಕು ಎಂದು ಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಹೇಳಿದ್ದಾರೆ. ಸಿನಿಮಾಕ್ಕೆ ಕೃಷ್ಣ ಸಾರಥಿ ಛಾಯಾಗ್ರಹಣ ಮಾಡಲಿದ್ದಾರೆ. ಸಂಕಲನ: ಮನು ಶೇಡ್‌ಗಾರ್, ಸಂಗೀತ: ಮಣಿಕಾಂತ್ ಕದ್ರಿ, ಸಾಹಿತ್ಯ ಶಶಿರಾಜ್ ಕಾವೂರು, ಅರ್ಜುನ್ ಲೂಯಿಸ್, ಡಿಸೈನ್ ದೇವಿ ರೈ, ಸಿನಿಮಾಕ್ಕೆ ಕತೆ, ಚಿತ್ರಕತೆ, ಸಂಭಾಷಣೆ , ನಿರ್ದೇಶನ ಕೆ. ಸೂರಜ್ ಶೆಟ್ಟಿ ತಾರಾಗಣದಲ್ಲಿ ಪೃಥ್ವಿ ಅಂಬರ್, ನವ್ಯ ಪೂಜಾರಿ, ನವೀನ್‌ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ನಾಯಕ್, ದೀಪಕ್ ರೈ ಪಾಣಾಜೆ, ರವಿರಾಮ ಕುಂಜ ಮೊದಲಾದವರು ಇದ್ದಾರೆ.

Also Read  ಹೆರಿಗೆ ವೇಳೆ ತೀವ್ರ ರಕ್ತಸ್ರಾವ- ತಾಯಿ ಮೃತಪಟ್ಟ ಪ್ರಕರಣ ➤ ಒಂದೇ ದಿನದೊಳಗೆ ಹಸುಗೂಸು ಮೃತ್ಯು

 

ರಾಷ್ಟ್ರೀಯ ಹಾಗೂ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡ ಚಿತ್ರ – ‘ಮಾರ್ಚ್ 22′

ACME ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹಾಗೂ ಹೆಸರಾಂತ ಹಿನ್ನೆಲೆ ಗಾಯಕ ಶ್ರೀ ಹರೀಶ್ ಶೇರಿಗಾರ್ ಹಾಗು ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಮಾರ್ಚ್ 22’ ಕನ್ನಡ ಚಿತ್ರದ ಚಿತ್ರದ ಹಾಡುಗಳ ಸಾಹಿತ್ಯಕಾಗಿ ಶ್ರೇಷ್ಠ ಗೀತೆ ರಚನೆಕಾರ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ‘ಮಾರ್ಚ್ 22’ ಕನ್ನಡ ಚಿತ್ರದ “ಮುತ್ತು ರತ್ನದ ಪೇಟೆ, ಛಿಧ್ರವಾಗಿದೆ ಕೋಟೆ” ಸುಮಧುರ ಹಾಡಿನ ರಚನೆಗೆ ಗೀತಾ ರಚನೆಕಾರ ಜೆ.ಎಂ. ಪ್ರಹ್ಲಾದ್ ಅವರಿಗೆ ಶ್ರೇಷ್ಠ ಗೀತೆ ರಚನೆಕಾರ ’65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ ಲಭಿಸಿದೆ. ದುಬೈನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಹೆಸರಾಂತ ಉದ್ಯಮಿ ಹಾಗೂ ಕನ್ನಡಿಗ ಪದ್ಮಶ್ರೀ ಡಾ. ಬಿ.ಆರ್ ಶೆಟ್ಟಿ ಅವರು ಈ ಹಾಡಿನಲ್ಲಿ ಅಭಿನಯಿಸುವ ಮೂಲಕ ಗಮನ ಸೆಳೆದಿದ್ದಾರೆ. ಖ್ಯಾತ ಹಿನ್ನೆಲೆ ಗಾಯಕ ಕೈಲಾಶ್ ಖೇರ್ ಈ ಹಾಡನ್ನು ಹಾಡಿದ್ದಾರೆ. ಮಾತ್ರವಲ್ಲದೇ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಕೂಡ ಪಡೆದಿದ್ದು, ‘ಮಾರ್ಚ್-22’ ಸಿನಿಮಾ 2ನೇ ‘ಅತ್ಯುತ್ತಮ ಚಿತ್ರ-‘ಅತ್ಯುತ್ತಮ ಗೀತಾ ರಚನಕಾರ’ ಎರಡು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದೇ ಸಿನೆಮಾದ ‘ಮುತ್ತು ರತ್ನದ ಪ್ಯಾಟೆ’ ಎನ್ನುವ ಹಾಡನ್ನು ಬರೆದಿರುವ ಜೆ.ಎಂ.ಪ್ರಹ್ಲಾದ್ ಅವರಿಗೆ ‘ಅತ್ಯುತ್ತಮ ಗೀತಾ ರಚನಕಾರ’ ರಾಜ್ಯ ಪ್ರಶಸ್ತಿ ಕೂಡ ಬಂದಿದೆ. ‘ಮಾರ್ಚ್ 22’ ಚಿತ್ರ ಕನ್ನಡ ಚಿತ್ರರಂಗದಲ್ಲಿ ಅಪಾರ ಮೆಚ್ಚುಗೆ ಹಾಗೂ ಉತ್ತಮ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

Also Read  ಆಲಂಕಾರು :  ಜೇಸಿಐ ನೂತನ ಘಟಕಾಧ್ಯಕ್ಷರಾಗಿ► ಹೇಮಲತಾ ಪ್ರದೀಪ್ ಆಯ್ಕೆ

error: Content is protected !!
Scroll to Top