ಆಲಂಕಾರು ಶಾಲಾ ಶತಮಾನೋತ್ಸವಕ್ಕೆ ಹಿರಿಯ ವಿದ್ಯಾರ್ಥಿಗಳ ಧನ ಸಹಾಯ

(ನ್ಯೂಸ್ ಕಡಬ) newskadaba.com, ಕಡಬ, ಜ.14    ಶತಮಾನೋತ್ಸವ ಸಂಭ್ರಮದಲ್ಲಿರುವ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರೋಪ ಸಮಾರಂಭ ಫೆ.1 ಮತ್ತು ಫೆ2 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯ ವಿತರಣೆಯು ಆಲಂಕಾರು ಗ್ರಾಮಾಧ್ಯಂತ ಏಕಕಾಲದಲ್ಲಿ ಸೋಮವಾರ ಆರಂಭಗೊಂಡಿತು.

ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಹಿರಿಯ ವಿದ್ಯಾರ್ಥಿಗಳು ಧನ ಸಹಾಯದ ರೂಪದಲ್ಲಿ ಕೈಜೋಡಿಸುತ್ತಿದ್ದಾರೆ. ಆಲಂಕಾರು ಗ್ರಾಮದ ನೆಕ್ಕರೆ ನಿವಾಸಿ ಶಾಲಾ ಹಿರಿಯ ವಿದ್ಯಾರ್ಥಿ ಸುಂದರ ಮುಗೇರ ಮತ್ತು ಮಕ್ಕಳು ಶಾಲಾ ಆಮಂತ್ರಣ ಪತ್ರಿಕೆ ನೀಡಲು ಬಂದ ಶಿಕ್ಷಕರಲ್ಲಿ 5 ಸಾವಿರ ಮೊತ್ತದ ಧನ ಸಹಾಯ ನೀಡಿದರು. ಈ ಸಂಧರ್ಭದಲ್ಲಿ ಶಾಲಾ ಶಿಕ್ಷಕರಾದ ಜಯಪ್ರಕಾಶ್, ಜನಾರ್ಧನ ಗೌಡ, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಅಬೂಬಕ್ಕರ್, ಉಪಾಧ್ಯಕ್ಷ ಜನಾರ್ಧನ ಗೌಡ ನಾಡ್ತಿಲ, ಚಂದ್ರಶೇಖರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Also Read  ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯು

error: Content is protected !!
Scroll to Top