ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಯುವ ಸಮಾವೇಶ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14   ಯುವಕಾರ್ಯ ಹಾಗೂ ಕ್ರೀಡಾಸಚಿವಾಲಯ ನೆಹರು ಯುವ ಕೇಂದ್ರ, ಮಂಗಳೂರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಭಾರತ್ ಸ್ಕೌಟ್ & ಗೈಡ್ಸ್ ಜಿಲ್ಲಾ ಸಂಸ್ಥೆ, ಜಿಲ್ಲಾ ಯುವ ಜನ ಒಕ್ಕೂಟ ದ.ಕ ಜಿಲ್ಲೆ ಇವರ ಆಶ್ರಯದಲ್ಲಿ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 157 ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಯುವ ಸಮಾವೇಶ ಇಂದು ಬೆಳಿಗ್ಗೆ 10.30 ಗಂಟೆಗೆ ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆ ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ವಹಿಸಲಿದ್ದಾರೆ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಜಿಲ್ಲಾ ಯುವ ಮಂಡಲ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.

Also Read  ಬಿಸಿಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ...! ➤ ಯುವತೇಜಸ್ಸು ತಂಡದಿಂದ ಬದುಕಿಸಲು ಯತ್ನ- ಆಸ್ಪತ್ರೆಗೆ ಸಾಗಿಸುವ ವೇಳೆ ವ್ಯಕ್ತಿ ಮೃತ್ಯು

error: Content is protected !!
Scroll to Top