ಎಂಡೋಸಲ್ಫಾನ್ ಸಂತ್ರಸ್ತರಿಗೆ-ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ,  18 ರಂದು ಪುತ್ತೂರು ತಾಲೂಕಿನ ಪಾಣಾಜೆ, ಮತ್ತು 21 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಹಾಗೂ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ.

Also Read  ಎನ್.ಎಸ್.ಎಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಜೆಸಿಐ ಸುಳ್ಯ ಸಿಟಿ ವತಿಯಿಂದ ಹೊಸ ವರ್ಷಾಚರಣೆ

ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top