ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು/ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡುವ ಬಗ್ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿಗಳು ದ.ಕ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘದಲ್ಲಿ, ಸ್ಥಳಿಯ ನ್ಯಾಯಾಲಯಗಳ ವಕೀಲರ ಸಂಘದಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿ/ ಸರಕಾರಿ ಅಭಿಯೋಕರು, ಮಂಗಳೂರು ಇವರ ಕಚೇರಿಯಲ್ಲಿ ಲಭ್ಯವಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ನ್ಯಾಯಾಲಯಗಳ/ ವಕೀಲರ ಸಂಘದ ನೋಟೀಸ್ ಬೋರ್ಡ್‍ಗಳಲ್ಲಿ ಹಾಗೂ ಜಿಲ್ಲಾಡಳಿತದ ವೆಬ್‍ಸೈಟ್ ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನ ಜನವರಿ 10. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 21 ಎಂದು ಸಹಾಯಕ ಸರ್ಕಾರಿ ಅಭಿಯೋಜಕರುಗಳ ನೇಮಕಾತಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ  ಪ್ರಕಟಣೆ ತಿಳಿಸಿದೆ.

Also Read  ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ನ.22 ರಂದು ಮಾಜಿ ಅಡ್ವೊಕೇಟ್ ಜನರಲ್ ಶ್ರೀ ಎ.ಎಸ್.ಪೊನ್ನಣ್ಣರವರು ಭೇಟಿ

error: Content is protected !!
Scroll to Top