ಎ.1ರಿಂದ ದೇಶದಾದ್ಯಂತ ಎನ್‌ಪಿಆರ್ ಪ್ರಕ್ರಿಯೆ ಆರಂಭ

ಹೊಸದಿಲ್ಲಿ, ಜ.17: ಎಪ್ರಿಲ್ 1 ರಿಂದ ದೇಶದಾದ್ಯಂತ ಎನ್‌ಪಿಆರ್ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದು, ಪ್ರಕ್ರಿಯೆ ಸಂದರ್ಭದಲ್ಲಿ ಗಣತಿದಾರರಿಗೆ ಜನರು ತಪ್ಪು ಅಥವಾ ಸುಳ್ಳು ಮಾಹಿತಿ ನೀಡುವುದು, ಮಾಹಿತಿ ನೀಡಲು ನಿರಾಕರಿಸುವುದನ್ನು ಮಾಡಿದರೆ ರೂ.1000ಕ ದಂಡ ತೆರಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಈ ಕುರಿತು ಗೃಹ ಸಚಿವಾಲಯ ಮಾಹಿತಿ ನೀಡಿದ್ದು, ನಾಗರೀಕತ್ವ ನಿಯಮ-17ರ ಪ್ರಕಾರ ತಪ್ಪು ಮಾಹಿತಿ ನೀಡಿದವರಿಗೆ ರೂ.1 ಸಾವಿರ ದಂಡ ಹಾಕಲು ಅವಕಾಶವಿದೆ ಎಂದು ಹೇಳಿದೆ. ಆದರೆ, 2011 ಹಾಗೂ 2015ರಲ್ಲಿ ನಡೆದ ಎನ್’ಪಿಆರ್ ಪ್ರಕ್ರಿಯೆ ವೇಳೆ ಈ ನಿಯಮವನ್ನು ಹೆಚ್ಚು ಬಳಕೆ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ.

error: Content is protected !!
Scroll to Top