ಸಿಎಎ ವಿರುದ್ಧ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಯುವಕ ಕುಸಿದು ಬಿದ್ದು ಮೃತ್ಯು

ಕಾಸರಗೋಡು, ಜ.21: ಬದಿಯಡ್ಕದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ಮೃತರನ್ನು ನೀರ್ಚಾಲು ಬಿರ್ಮಿನಡ್ಕದ ಇಕ್ಬಾಲ್(28) ಎಂದು ಗುರುತಿಸಲಾಗಿದೆ. ಎಸ್ಕೆಎಸ್ಸೆಸ್ಸೆಫ್‌ನ ಸ್ವಯಂ ಸೇವಕರಾಗಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಇಕ್ಬಾಲ್ ಕುಸಿದುಬಿದ್ದಿದ್ದು, ಕೂಡಲೇ ಬದಿಯಡ್ಕ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಕಾಸರಗೋಡು ಆಸ್ಪತ್ರೆಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Also Read  ಆಲಂಕಾರು: ಎಂಡೋ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ

error: Content is protected !!
Scroll to Top