ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು – ರಾಮಕೃಷ್ಣ ರೈ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ ಜೀವವನ್ನು ಉಳಿಸುವುದು ನಮ್ಮ  ಮೊದಲ ಕರ್ತವ್ಯವಾಗಿರುತ್ತದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ ಹೇಳಿದರು.

ಪ್ರಾದೇಶಿಕ ಸಾರಿಗೆ ಕಚೇರಿಯ ಸಭಾಂಗಣದಲ್ಲಿ  ಶನಿವಾರ ಏರ್ಪಡಿಸಿದ್ದ 31 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು ಎಲ್ಲರೂ ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು, ವಾಹನ ಚಾಲನೆ ಸಮಯದಲ್ಲಿ ಮೊಬೈಲ್ ಬಳಸಬಾರದು ಹಾಗೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದರ ಜೊತೆಗೆ  ವಾಹನಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ತಮ್ಮ ಬಳಿ ಹೊಂದಿರಬೇಕು. ವಾಹನಗಳನ್ನು ಜಾಗರೂಕತೆಯಿಂದ ಚಲಾಯಿಸಬೇಕು ಎಂದು ಸಲಹೆ ನೀಡಿದರು. ಸಮಾರಂಭದಲ್ಲಿ ಭಾಗವಹಿಸಿದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ್ ಮಾತನಾಡಿ,  ಉಡುಪಿ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಅಪಘಾತಗಳ ಸಂಖ್ಯೆಯು ಗಣನೀಯವಾಗಿ ಕಡಿಮೆವಾಗುತ್ತಿದೆ ಅದರಂತೆ ನಮ್ಮ ಜಿಲ್ಲೆಯಲ್ಲಿ ಮುಂದಿನ ದಿನದಲ್ಲಿ ಅಪಘಾತ ಕಡಿಮೆ ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸಬೇಕು ಎಂದರು. ರಸ್ತೆಯಲ್ಲಿ ಸಂಭವಿಸುವಂತಾ  ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಡ್ರೈವಿಂಗ್ ಸ್ಕೂಲ್ ಗಳ ಪಾತ್ರ ಅತೀ ಮುಖ್ಯವಾಗಿರುತ್ತದೆ. ತರಬೇತಿ ನೀಡುವ ಸಮಯದಲ್ಲಿ ಅವರು ಉತ್ತಮ ರೀತಿಯಲ್ಲಿ ತರಬೇತಿ ನೀಡಬೇಕು ಎಂದರು. ಸಮಾರಂಭಕ್ಕೆ  ಸಾರ್ವಜನಿಕರು, ವಾಹನ ತರಬೇತುದಾರರು, ಸಾರಿಗೆ  ವಾಹನ ಮಾಲೀಕರು, ಮಾರಾಟಗಾರರು ಮತ್ತು ಸಿಂಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Also Read  ಗರ್ಭಿಣಿಯರಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ ➤ ಕೋಟ ಶ್ರೀ ನಿವಾಸ ಪೂಜಾರಿ

error: Content is protected !!
Scroll to Top