ಜ.26 ರಂದು ಚಿತ್ರಕಲೆ ಮತ್ತು ವೇಷ ಭೂಷಣ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಕದ್ರಿ ಜಿಲ್ಲಾ ಬಾಲಭವನದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವದ ಅಂಗವಾಗಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಚಿತ್ರಕಲೆ ಮತ್ತು ವೇಷ ಭೂಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.


ಆಸಕ್ತಿ ಇರುವ ಮಕ್ಕಳು ಜನವರಿ 24 ರ ಒಳಗಾಗಿ ನಿಗದಿತ ನಮೂನೆಯಲ್ಲಿ ಜನನ ಪ್ರಮಾಣ ಪತ್ರ ಹಾಗೂ ಭಾವಚಿತ್ರದೊಂದಿಗೆ ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ ಉರ್ವಸ್ಟೋರ್ ಮಂಗಳೂರು ಇಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0824-2451254ನ್ನು ಸಂಪರ್ಕಿಸಲು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಹಾಗೂ ಕಾರ್ಯದರ್ಶಿಗಳು, ಜಿಲ್ಲಾ ಬಾಲಭವನ ಸಮಿತಿ ದ.ಕ.ಜಿಲ್ಲೆ., ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ದೇಶದಲ್ಲಿ ಸಮಾನತೆ, ಏಕತೆಯನ್ನು ರೂಪಿಸುವಲ್ಲಿ ಸಂವಿಧಾನ ಮುಖ್ಯ ಪಾತ್ರ ನಿರ್ವಹಿಸುತ್ತದೆ

Nk Kukke

error: Content is protected !!
Scroll to Top