(ನ್ಯೂಸ್ ಕಡಬ) newskadaba.com ರಾಮನಗರ, ಆ.25, ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಶುಕ್ರವಾರ ನಡೆದಿದೆ.
ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.