ಮುಸ್ಲಿಮರ ಕೇರಿಗಳನ್ನು ಅಭಿವೃದ್ಧಿ ಮಾಡಲ್ಲ: ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ

ದಾವಣಗೆರೆ, ಜ.21:  ಮುಸ್ಲಿಮರನ್ನು ಎಲ್ಲಿಡಬೇಕೋ ಅಲ್ಲಿ ಇಡುತ್ತೇನೆ, ಮುಸ್ಲಿಮರ ಕೇರಿಗಳಿಗೆ ಬಂದಿರುವ ಹಣವನ್ನು ಹಿಂದೂಗಳ ಕೇರಿಗಳ ಅಭಿವೃದ್ಧಿಗೆ ಬಳಸುತ್ತೇನೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹೊನ್ನಾಳಿಯಲ್ಲಿ ಸಿಎಎ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ರೇಣುಕಾಚಾರ್ಯ, ಮುಸ್ಲಿಮರನ್ನು ಎಲ್ಲಿಡಬೇಕೋ ಅಲ್ಲಿ ಇಡುತ್ತೇನೆ, ಅವರ ಬೆಂಬಲ ನನಗೆ ಬೇಡ ಹೊನ್ನಾಳಿ, ನ್ಯಾಮತಿ ತಾಲೂಕನ್ನು ಕೇಸರಿಮಯ ಮಾಡುತ್ತೇನೆ ಎಂದು ಹೇಳಿದ್ದಾರೆ.

ಭಾರತ ಏನು ಭಯೋತ್ಪಾದಕರ ಮಾವನ ಮನೆನಾ, ನಿಮಗೆ ಪಾಕಿಸ್ತಾನದಿಂದ ಹಣ ಬಂದಿದ್ದರೆ ಮೃತರ ಕುಟುಂಬಕ್ಕೆ ನೀಡಿ, ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಮಾಯಕರಲ್ಲ. ಎಂದು ರೇಣುಕಾಚಾರ್ಯ ಹೇಳಿಕೆಯನ್ನು ಕೊಟ್ಟಿದ್ದಾರೆ.

Scroll to Top