ವಿಟ್ಲ: ಆಕಸ್ಮಿಕ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ, ಜ.22: ಸ್ನಾನಕ್ಕೆ ತೆರಳಿದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವಿಟ್ಲ ಪಡ್ನೂರು ಗ್ರಾಮದ ಪಿಲಿಂಜದಲ್ಲಿ ನಡೆದಿದೆ. ಮೃತರನ್ನು ವಿಟ್ಲ ಪಡ್ನೂರು ಪಿಲಿಂಜ ನಿವಾಸಿ ಸೋಮಪ್ಪಪೂಜಾರಿ (58) ಎಂದು ಗುರುತಿಸಲಾಗಿದೆ.

ಬೆಳಗ್ಗೆ ಎಂದಿನಂತೆ ಸ್ನಾನಕ್ಕೆಂದು ತೋಟದ ಬಾವಿಯ ಸಮೀಪ ತೆರಳಿದ್ದಾರೆ. ಮತ್ತೆ ಮರಳಿ ಮನೆಗೆ ಬಾರದೆ ಇರುವುದನ್ನು ಕಂಡು ಮನೆಯವರು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಬಾವಿಗೆ ಹಾಕಿದ ಅಡಿಕೆ ಮರದ ತಡೆ ತುಂಡಾಗಿ ಬಿದ್ದಿರುವುದು ಕಂಡು ಬಂದಿದೆ.

Also Read  SP ಕಛೇರಿ ಪುತ್ತೂರಿಗೆ ಸ್ಥಳಾಂತರಿಸುವ ಪ್ರಯತ್ನ ನಡೆಯುತ್ತಿದೆ ➤ ಗೃಹ ಸಚಿವ

ಬಾವಿಯಲ್ಲಿ ಪರಿಶೀಲನೆ ನಡೆಸಿದಾಗ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು, ಫ್ರೆಂಡ್ಸ್ ವಿಟ್ಲ ತಂಡದ ಸಹಕಾರದಿಂದ ಮೃತ ದೇಹವನ್ನು ಮೇಲೆತ್ತಿದ್ದಾರೆ. ಪುತ್ರ ನೀಡಿದ ದೂರಿನನ್ವಯ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top