ಮಂಗಳೂರು ಸ್ಫೋಟಕದ ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥ: ಬೊಮ್ಮಾಯಿ

ಬೆಳಗಾವಿ, ಜ.22: “ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ ಮಾನಸಿಕ ಅಸ್ವಸ್ಥರಾಗಿದ್ದಾರೆ. ಕೆಲಸ ದೊರಕಿಲ್ಲ ಎಂದು ಮಾನಸಿಕ ಖಿನ್ನತೆಗೆ ಒಳಗಾಗಿ ಇಂತಹ ಕೃತ್ಯ ಮಾಡಿದ್ದಾರೆ” ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಡುವ ಮೊದಲು ಆದಿತ್ಯ ರಾವ್ ಅವರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿದ್ದಾರೆ ಎನ್ನುವ ಬಗ್ಗೆ ಸುಳ್ಳು ಕರೆ ಮಾಡಿ ಶಿಕ್ಷೆ ಅನುಭವಿಸಿದ್ದಾರೆ. ತನಿಖೆ ಮಾಡಲು 3 ತಂಡಗಳನ್ನು ರಚಿಸಲಾಗಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ಮಾಡಲಾಗುತ್ತಿದೆ” ಎಂದರು.

Also Read  ಕಾನೂನು ಬಾಹಿರ ಶಸ್ತ್ರಾಸ್ತ್ರ ತರಬೇತಿ ➤ ಫ್ರೀಡಂ ಕಮ್ಯೂನಿಟಿ ಹಾಲ್‌ NIA ವಶಕ್ಕೆ

“ಕಾಂಗ್ರೆಸ್ಸಿಗರು ಹಾಗೂ ಎಚ್‌ಡಿ ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತರ ಓಲೈಕೆಗಾಗಿ ಪೈಪೋಟಿ ನಡೆಸಿದ್ದಾರೆ. ಅತ್ಯಂತ ಬೇಜವಾಬ್ದಾರಿಯಿಂದ ವಿರೋಧ ಪಕ್ಷಗಳ ನಾಯಕರು ಹೇಳಿಕೆ ನೀಡುತ್ತಿದ್ದಾರೆ” ಎಂದು ಹೇಳಿದರು.

“ಮಂಗಳೂರು ಪ್ರಕರಣದ ವಿಚಾರವಾಗಿ ರಾಜಕೀಯ ಮಾಡಲಾಗುತ್ತಿದೆ. ರಾಜಕೀಯ ಮಾಡುವಾಗ ದೇಶದ್ರೋಹಿ ಕಾರ್ಯಗಳಿಗೆ ಪ್ರೋತ್ಸಾಹ ನೀಡಬಾರದು. ಎಚ್‌ಡಿಕೆ ಅವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು” ಎಂದರು.

error: Content is protected !!
Scroll to Top