ಬೆಳ್ಳಾರೆ: ಬೈಕ್ ಹಿಟ್ ಆ್ಯಂಡ್ ರನ್ ➤ ಜಾತ್ರೆಗೆ ತೆರಳಿ ಹಿಂತಿರುಗುತ್ತಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.22. ಬೈಕೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದರಿಂದ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಪೆರ್ಲಂಪಾಡಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ಮೃತ ಬಾಲಕನನ್ನು ಕೊಳ್ತಿಗೆ ಗ್ರಾಮದ ಎಕ್ಕಡ್ಕ‌ ನಿವಾಸಿ ಮೋಹನ್ ಎಂಬವರ ಪುತ್ರ ಅವಿನಾಶ್ (10) ಎಂದು ಗುರುತಿಸಲಾಗಿದೆ. ಅವಿನಾಶ್ ತನ್ನ ಮನೆಯವರೊಂದಿಗೆ ಜಾತ್ರೆಗೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ವೇಗವಾಗಿ ಬಂದ ಬೈಕೊಂದು ಢಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಲಕನನ್ನು ಬೆಳ್ಳಾರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ಳಾರೆ ಎಸ್ಕೆಎಸ್ಸೆಸ್ಸೆಫ್ ಸದಸ್ಯರಾದ ಜಮಾಲ್ ಹಾಗೂ ಅಝರುದ್ದೀನ್ ಎಂಬವರು ತಮ್ಮ ಕಾರಿನಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದರಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಜಾತ್ರೆಗೆ ತೆರಳಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬಾಲಕನ ಹೆತ್ತವರ ಕಣ್ಣೆದುರೇ ಘಟನೆ ನಡೆದುದರಿಂದ ಮನೆಯವರ ಆಕ್ರಂದನ ಮುಗಿಲು ಮುಟ್ಟಿತ್ತು.

Also Read  ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು

error: Content is protected !!
Scroll to Top