ಬೆಂಗಳೂರು, ಜ.23:  ಅನುಮಾನಾಸ್ಪದ ಸ್ಫೋಟ ಸಂಭವಿಸಿದ ಪರಿಣಾಮ ಶಾಸಕ ಎನ್‌.ಎ.ಹ್ಯಾರಿಸ್‌ ಸೇರಿದಂತೆ ಕೆಲವರಿಗೆ ಗಾಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ.

ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಪಾಲ್ಗೊಂಡಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ತಕ್ಷಣ ಶಾಸಕರು ಸೇರಿದಂತೆ ಗಾಯಗೊಂಡವರನ್ನು ಸೈಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವೇಕನಗರದಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹಾರಿಸ್ ಅವರು ವೇದಿಕೆಯಲ್ಲಿ ಕುಳಿತಿದ್ದರು. ಈ ವೇಳೆ ವಸ್ತುವೊಂದು ಬಂದು ಅಪ್ಪಳಿಸಿ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೋಲೀಸರು, ಶ್ವಾನದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಶಾಸಕರ ಪುತ್ರ ನಲಪಾಡ್ ಪ್ರತಿಕ್ರಯಿಸಿದ್ದು “ಇದೊಂದು ಪೂರ್ವನಿಯೋಜಿತ ಕೃತ್ಯ, ಯಾರೋ ಉದ್ದೇಶಪೂರ್ವಕ ಮಾಡಿದ್ದಾರೆ. ತಂದೆ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ” ಎಂದರು.

Also Read  ಹಿಜಾಬ್ / ಕೇಸರಿ ಶಾಲು ವಿವಾದ ➤ ಡಿಸಿ- ಎಸ್ಪಿಗಳ ಜೊತೆ ಸಿಎಂ‌ ಮಹತ್ವದ ಸಭೆ