ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಉಚಿತ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    2019-20ನೇ ಸಾಲಿನ  ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಪದವಿ ಪಡೆದಿರುವ 21 ರಿಂದ 30 ವಯೋಮಾನದ ಮಿತಿಯೊಳಗಿನ ಅಭ್ಯರ್ಥಿಗಳಿಗೆ 90 ದಿನಗಳ ಊಟ ಮತ್ತು ವಸತಿಯೊಂದಿಗೆ ಬೆಳಗಾವಿ, ಬೆಂಗಳೂರು, ಮೈಸೂರು, ಕಲ್ಬುರ್ಗಿ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ದಾವಣಗೆರೆ, ಮಂಗಳೂರು ಕೇಂದ್ರಗಳಲ್ಲಿ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ  ಜನವರಿ 31.


ಅರ್ಜಿಯನ್ನು ಆನ್‍ಲೈನ್ ವೆಬ್‍ಸೈಟ್ ನ ಮೂಲಕ ಸಲ್ಲಿಸಿ ಹಾರ್ಡ್‍ಕಾಪಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲಾನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇವರನ್ನು ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,  ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಏರ್ ಟೆಲ್ ಬ್ರಾಡ್ ಬ್ಯಾಂಡ್ ಗ್ರಾಹಕರಿಗೆ ಗುಡ್ ನ್ಯೂಸ್ ► ಬಳಕೆಯಾಗದೇ ಉಳಿದ ಡಾಟಾವನ್ನು ಮುಂದಿನ ತಿಂಗಳು  ಬಳಕೆ ಮಾಡಬಹುದು

error: Content is protected !!
Scroll to Top