ಬಯೋ ಮೆಡಿಕಲ್ ತ್ಯಾಜ್ಯ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ನಿಟ್ಟೆ ವಿಶ್ವವಿದ್ಯಾನಿಲಯ ದ.ಕ ಜಿಲ್ಲಾಡಳಿತ ಇವರ ಆಶ್ರಯದಲ್ಲಿ ಬಯೋ ಮೆಡಿಕಲ್ ತ್ಯಾಜ್ಯ ನಿರ್ವಹಣೆ ಹಾಗೂ ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ನಿರ್ದೇಶನ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮ ನಾಳೆ ಬೆಳಿಗ್ಗೆ 9.30 ಗಂಟೆಗೆ ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯದ ಹೊಸ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಬಿ ಸತೀಶ್ ಕುಮಾರ್ ಭಂಡಾರಿ ವಹಿಸಲಿದ್ದಾರೆ.

Also Read  ಮತ್ತೊಂದು ಡೆಡ್ಲಿ ವೈರಸ್ ಅಟ್ಯಾಕ್ ➤ ನೀರಿನಲ್ಲಿ ಕಂಡು ಬಂತು ಮನುಷ್ಯರ ಮೆದುಳು ತಿನ್ನುವ ಅಮಿಬಾ..!!

error: Content is protected !!
Scroll to Top