(ನ್ಯೂಸ್ ಕಡಬ) Newskadaba.com ಕಡಬ. ಜ.24. ಫೆಬ್ರವರಿ 08ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಿಂದ ಆಯ್ಕೆಯಾದ ಹತ್ತು ಜನರ ಪೈಕಿ ಮರ್ಧಾಳದ ಅಬ್ದುಲ್ ರಝಾಕ್ ಸೇರಿದ್ದಾರೆ.
ಜನವರಿ 24ರಿಂದ ಫೆಬ್ರವರಿ 04ರ ವರೆಗೆ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಇವರು ಈ ಬಾರಿಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ದಕ್ಷಿಣ ಕನ್ನಡ ಇದರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಸಿವೈಎಸ್ಎಸ್ ಕರ್ನಾಟಕ ರಾಜ್ಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಇವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ತೃತೀಯ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇವರು ಮರ್ಧಾಳದ ಇಸ್ಮಾಯಿಲ್ ಸರ್ವೀಸ್ ಹಾಗೂ ಲೈಲಾ ದಂಪತಿಗಳ ಪುತ್ರ.